ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರು ಇಂದು ಪಕ್ಷದ ನಾಯಕರ ಜೊತೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಸಿ.ವೇಣುಗೋಪಾಲ್ ಅವರು ಖಾತೆಗಳ ಹಂಚಿಕೆ ಫೈನಲ್ ಮಾಡಿದ್ದೇವೆ. ಹೈಕಮಾಂಡ್ ತೀರ್ಮಾನದ ಬಳಿಕ ಪಟ್ಟಿ ಪ್ರಕಟಿಸುತ್ತೇವೆ. ಆದಷ್ಟು ಬೇಗನೆ ಖಾತೆಗಳ ಹಂಚಿಕೆ ಆಗಲಿದೆ ಎಂದಿದ್ದಾರೆ.