ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಯೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ವಿಷಯ ತಿಳಿದ ದರ್ಶನ್ ಅವರು ಬೇಸರ ವ್ಯಕ್ತಪಡಿಸಿದ್ದು, ಅಭಿಮಾನಿ ಸಾವಿಗೆ ದರ್ಶನ್ ಅವರು ಸಂತಾಪ ಸೂಚಿಸಿದ್ದಾರೆ. ನಿನ್ನೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಕೇಳಿ ತುಂಬಾ ಬೇಸರವಾಗಿದೆ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ.ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.











