ರಾಯಚೂರು: ಶ್ರಾಮಣ ಮಾಸದ ಕಡೆಯ ಸೋಮವಾರದ ಹಿನ್ನಲೆ ರಾಯಚೂರು ಸೂಗೂರೇಶ್ವರ ದೇವರ ದರ್ಶನಕ್ಕೆ ಹಿರಿಯ ನಟ ದೊಡ್ಡಣ್ಣ ಅವರು ಕುಟುಂಬ ಸಮೇತ ಆಗಮಿಸಿದ್ದು,ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದಾಗ, ಅವರಿಗೆ ರಕ್ತದೊತ್ತಡ ಹೆಚ್ಚಾಗಿದ್ದರಿಂದ ಕುಸಿದು ಬಿದ್ದಿದ್ದು, ಅವರನ್ನು ಕೂಡಲೇ ಸ್ಥಳೀಯ ಆರ್.ಟಿ.ಪಿ.ಎಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು,ಹೆಚ್ಚಿನ ಚಿಕಿತ್ಸೆಗೆ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.