ಬೆಂಗಳೂರು: ನಿನ್ನೆ ನಟ ಯಶ್ ನಿವಾಸದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಯಶ್ ಅಭಿಮಾನಿ ರವಿ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಂಬರೀಶ್ ಅವರ ಸಾವಿನ ಹಿನ್ನೆಲೆಯಲ್ಲಿ ಯಶ್ ತಮ್ಮ ಜನ್ಮದಿನವನ್ನು ಆಚರಣೆ ಮಾಡಿಕೊಂಡಿರಲಿಲ್ಲ. ಯಶ್ ಅಭಿಮಾನಿ ರವಿ ಎಂಬಾತ ನಿನ್ನೆ ಯಶ್ ಹುಟ್ಟುಹಬ್ಬದ ದಿನ ಅವರನ್ನು ಭೇಟಿ ಮಾಡಲು ಆಗಲಿಲ್ಲ ಎಂಬ ಕಾರಣಕ್ಕೆ ರವಿ ಯಶ್ ಅವರ ನಿವಾಸದ ಮುಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ರವಿ ಕೊನೆಯುಸಿರೆಳೆದಿದ್ದಾರೆ.










