ಚಿರು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ನಟಿ ಮೇಘನಾ ರಾಜ್…

225
firstsuddi

ಬೆಂಗಳೂರು : ಇತ್ತೀಚೆಗಷ್ಟೇ ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದ ದಿವಂಗತ ನಟ ಚಿರಂಜೀವಿ ಸರ್ಜಾ ಅವರ ಪತ್ನಿ ನಟಿ ಮೇಘನಾ ರಾಜ್ ಅವರು ಚಿರಂಜೀವಿ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಚಿರಂಜೀವಿ ಸರ್ಜಾ ಅವರು ಅಭಿನಯದ ಕೊನೆ ಸಿನಿಮಾ ಶಿವಾರ್ಜುನ ಇದೇ ಅಕ್ಟೋಬರ್ 16ರಂದು ಮರು ಬಿಡುಗಡೆ ಮಾಡಲಾಗುತ್ತಿದ್ದು, ಈ ಸುದ್ದಿಯನ್ನು ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಚಿರು ಮತ್ತೆ ಉದಯಿಸುತ್ತಿದ್ದಾರೆ, ಅದಕ್ಕೆ ಕಾರಣ ಅಕ್ಟೋಬರ್ 16ರಂದು ಅವರ ಶಿವಾರ್ಜುನ ಸಿನಿಮಾ ಮತ್ತೆ ಬಿಡುಗಡೆಯಾಗುತ್ತಿದೆ ಎಂದು” ಬರೆದುಕೊಂಡಿದ್ದಾರೆ. ಅಕ್ಟೋಬರ್ 17ರಂದು ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬವಿರುವ ಹಿನ್ನೆಲೆ ಚಿರು ಅವರ ಕೊನೆಯ ಶಿವಾರ್ಜುನ ಸಿನಿಮಾವನ್ನು ಬಿಡುಗಡೆ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.