ನಟಿ ರಾಗಿಣಿ ದ್ವಿವೇದಿ ಅವರಿಗೆ ಸುಪ್ರೀಂ ಕೋರ್ಟ್‍ನಿಂದಲೂ ಸಿಗಲಿಲ್ಲ ಜಾಮೀನು…

136
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ನಂಟು ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು ಕೂಡಾ ಜಾಮೀನು ಕೈ ತಪ್ಪಿದ್ದು, ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ನಟಿ ರಾಗಿಣಿ ದ್ವಿವೇದಿ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್‍ಗೆ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ.