ನಟಿ ಉಮಾಶ್ರೀ ಅವರಿಗೆ ಸೇರಿದ ಕಾರು ಅಪಘಾತ –ಇಬ್ಬರ ಸಾವು…

194
firstsuddi

ಹುಬ್ಬಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಂಡಿವಾಡ ಬಳಿ ನಡೆದಿದೆ. ಅಪಘಾತ ನಡೆದ ಇನ್ನೋವಾ ಕಾರು ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ್ದು, ಕಾರಿನಲ್ಲಿ ಉಮಾಶ್ರೀ ಅವರು ಇರಲಿಲ್ಲ ಎಂದು ತಿಳಿದು ಬಂದಿದೆ. ಇನ್ನೋವಾ ಕಾರು ಎದುರಿಗೆ ಬರುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ ಓರ್ವ ವೈದ್ಯೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.