ಬೆಂಗಳೂರು : ಮಾಜಿ ಸಚಿವ ಯು.ಟಿ. ಖಾದರ್ ಅವರಿಗೆ ಬೆದರಿಕೆ ಕರೆ ಬಂದಿರುವ ಹಿನ್ನೆಲೆ, ಅವರಿಗೆ ಸೂಕ್ತ ಭದ್ರತೆ ನೀಡಲು ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯು.ಟಿ. ಖಾದರ್ ಅವರಿಗೆ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ ಗನ್‍ಮ್ಯಾನ್ ಕೊಟ್ಟಿದ್ದೇವೆ. ಅಲ್ಲದೇ ಅವರು ಯು.ಟಿ. ಖಾದರ್ ಅವರು ಏನೆಲ್ಲ ಭದ್ರತೆ ಕೇಳುತ್ತಾರೋ ಅದನ್ನು ನೀಡುವಂತೆ ಸ್ಥಳೀಯ ಪೊಲೀಸರಿಗೂ ಸೂಚನೆ ನೀಡಿದ್ದೇವೆ. ಬೆದರಿಕೆ ಕರೆ ಬಂದಿರುವ ಕುರಿತು ಖಾದರ್ ಅವರು ಕೂಡಾ ಪೊಲೀಸರ ಬಳಿ ಎಲ್ಲಾ ಮಾಹಿತಿಯನ್ನು ಹಂಚಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.










