ಮಂಗಳೂರಿನಿಂದ ಮುಂಬೈಗೆ ತೆರಳುತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಅಧಿಕಾರಿಗಳಿಂದ ಪರಿಶೀಲನೆ.

334
firstsuddi

ಮಂಗಳೂರು- ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದೆ. ಮಂಗಳೂರಿನಿಂದ ಮುಂಬೈಗೆ ತೆರಳಬೇಕಾಗಿದ್ದ ವಿಮಾನ ಟೇಕ್ ಆಫ್ ಆಗಬೇಕು ಎನ್ನುವಷ್ಟರಲ್ಲಿ ಏರ್ ಇಂಡಿಯಾ ವಿಮಾನ ಸ್ಥಗಿತಗೊಂಡಿದೆ.ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.