ಅಬುಧಾಬಿ: ಅಬುಧಾಬಿಯಲ್ಲಿ ನಡೆಯುತ್ತಿರುವ ಒಐಸಿ (ಇಸ್ಲಾಮಿಕ್ ಸಹಕಾರ ಸಂಘಟನೆ) ಸಭೆಗೆ ಭಾರತ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮುಖ್ಯಅತಿಥಿಯಾಗಿ ಭಾಗವಹಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಸುಷ್ಮಾ ಸ್ವರಾಜ್ ಅವರು ಭಾರತ ವಿವಿಧತೆಯಿಂದ ಕೂಡಿದ ರಾಷ್ಟ್ರವಾಗಿದೆ. ಮಹಾತ್ಮಾ ಗಾಂಧೀಜಿ ಅವರು ಜಗತ್ತಿಗೆ ಶಾಂತಿ ಪಾಠವನ್ನು ಬೋಧಿಸಿದ್ದಾರೆ. ಭಾರತದಲ್ಲಿ ಎಲ್ಲಾ ಧರ್ಮ ಎಲ್ಲಾ ಸಂಸ್ಕೃತಿಯನ್ನು ಗೌರವಿಸಲಾಗುತ್ತದೆ. ಭಯೋತ್ಪಾದನೆ ವಿರುದ್ಧದ ಹೋರಾಟವು ಯಾವುದೇ ಧರ್ಮದ ವಿರುದ್ಧದ ಹೋರಾಟವಲ್ಲ. ಭಯೋತ್ಪಾದನೆಯಿಂದ ವಿಶ್ವದಲ್ಲೇ ಹಿಂಸಾಚಾರ ಹೆಚ್ಚಾಗಿದೆ. ಇಂತಹ ಭಯೋತ್ಪಾದನೆ ವಿರುದ್ಧ ಜಗತ್ತಿನ ದೇಶಗಳೆಲ್ಲಾ ಒಟ್ಟಾಗಿ ಹೋರಾಡಬೇಕಿದೆ. ಆದರೆ ಕೆಲ ದೇಶಗಳು ಭಯೋತ್ಪಾದನೆಗೆ ಆಶ್ರಯ ನೀಡುತ್ತಿದೆ. ಭಯೋತ್ಪಾದನೆಗೆ ಹಣ ನೀಡುವ, ಆಶ್ರಯ ನೀಡುವ ದೇಶಗಳ ಬಣ್ಣ ಬಯಲು ಮಾಡಬೇಕಿದೆ ಎಂದು ತಿಳಿಸಿದರು.