ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ನಮ್ಮ ಶಾಸಕರು ನಮ್ಮ ಸಂಪರ್ಕದಲ್ಲೇ ಇದ್ದಾರೆ. ನಮ್ಮ ಸಮ್ಮಿಶ್ರ ಸರ್ಕಾರಕ್ಕೆ ಅಗತ್ಯ ಸಂಖ್ಯಾಬಲವಿದೆ. 3 ದಿನಗಳಿಂದ ಎಲ್ಲರ ಜೊತೆ ಮಾತಾಡಿದ್ದೇನೆ. ಎಲ್ಲಾ ಶಾಸಕರು ನಮ್ಮ ನಿಯಂತ್ರಣದಲ್ಲಿದ್ದಾರೆ. ನಮಗೆ ಆತಂಕವಿಲ್ಲ. ನಮ್ಮ ಯಾವ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡಲ್ಲ. ನಮಗ್ಯಾರಿಗೂ ಆಪರೇಷನ್ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.










