ಮೂಡಿಗೆರೆ- ದೆಹಲಿಯಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣವೊಂದರ ಆರೋಪಿಗಳಿಗೆ ನ್ಯಾಯಲಯವು ಗಲ್ಲು ಶಿಕ್ಷೆ ವಿಧಿಸಿದ್ದು, ಸ್ವಾಗತರಹ ಎಲ್ಲಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮೂಡಿಗೆರೆ ತಾಲೂಕು ಕಛೇರಿ ಎದುರು ಪೀಸ್ ಅಂಡ್ ಅವೇರ್ನೆಸ್ ಟ್ರಸ್ಟ್ ನಿಂದ ಪ್ರತಿಭಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್ ನ ಸಂಸ್ಥಾಪಕರಾದ ಅಲ್ತಾಫ್ ಬಿಳಗುಳ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗುವ ಆರೋಪಿಗಳನ್ನು ತ್ವರಿತವಾಗಿ ವಿಚಾರಣೆ ನಡೆಸಿ ತಪ್ಪಿತಸ್ಥರಾದರೆ ವಿಳಂಬ ಮಾಡದೆ ಗಲ್ಲು ಶಿಕ್ಷೆ ವಿಧಿಸಬೇಕು. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವುದರಿಂದ ದೇಶದೆಲ್ಲೆಡೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣವನ್ನು ತಡೆಗಟ್ಟಬಹುದು ಎಂದು ತಿಳಿಸಿದರು.