ಬೆಳಗಾವಿ: ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು ಉಮೇಶ್ ಕತ್ತಿ ಹೇಳಿಕೆ ಹಾಸ್ಯಾಸ್ಪದವಾಗಿದೆ. ಶಾಸಕರು ಪಕ್ಷ ಬಿಡುವ ವಿಚಾರ ಸುಳ್ಳು. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಯಾವುದೇ ಆತಂಕ ಇಲ್ಲ. ರಮೇಶ್ ಜಾರಕಿಹೊಳಿ ಜೊತೆ ನಾನು ಮಾತನಾಡಿಲ್ಲ, ನಾಳೆ ಅಥವಾ ನಾಡಿದ್ದು ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡುವೆ. ಭೇಟಿ ಮಾಡಿದ ಬಳಿಕ ಎಲ್ಲವೂ ಸರಿಯಾಗಲಿದೆ ಎಂದು ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.










