ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗ ಸಚಿವ ಹೆಚ್ ಡಿ ರೇವಣ್ಣ ಅವರು ಎಲ್ಕೆಜಿಯಿಂದಲೇ ಇಂಗ್ಲಿಷ್ ಮಾಧ್ಯಮ ಇರಬೇಕು. ಈ ಬಗ್ಗೆ ಮುಖ್ಯಮಂತ್ರಿ ಬಳಿ ನಾನೇ ಮನವಿ ಮಾಡುತ್ತೇನೆ. ಶ್ರೀಮಂತರ ಮಕ್ಕಳಿನಂತೆ ಬಡವರ ಮಕ್ಕಳು ಇಂಗ್ಲೀಷ್ ಕಲಿಯಬೇಕು ಎಂದಿದ್ದಾರೆ. ನಾನು ಬೇರೆ ಖಾತೆಗಳ ಬಗ್ಗೆ ಹಸ್ತಕ್ಷೇಪ ಮಾಡಿಲ್ಲ. ಪರಮೇಶ್ವರ್ ಅವರೇ ರೇವಣ್ಣ ಗೃಹ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿದರು ಅಂತ ಹೇಳಲಿ. ಸಮ್ಮಿಶ್ರ ಸರ್ಕಾರ ರಚನೆಯಾದ 6 ತಿಂಗಳಿಂದಲೂ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಆದರೆ ಮೈತ್ರಿ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ ಎಂದು ತಿಳಿಸಿದ್ದಾರೆ.










