ಮೈತ್ರಿ ಪಕ್ಷ ಜಂಟಿಯಾಗಿ ಚುನಾವಣೆಗೆ ದುಡಿಯಲಿದ್ದೇವೆ:ಡಾ.ಜಿ ಪರಮೇಶ್ವರ್…

203
firstsuddi

ಬೆಂಗಳೂರು: ಇಂದು ನಡೆದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಜಂಟಿ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಭಾಗವಹಿಸಿರಲ್ಲ. ಇದಕ್ಕೆ ಸಂಬಂಧಿಸಿದಂತೆ ಅವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದು, ಕುಟುಂಬದಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮವಿದ್ದ ಕಾರಣ ಇಂದು ಕಾಂಗ್ರೆಸ್- ಜೆಡಿಎಸ್ ಪಕ್ಷದ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ.ಮೈತ್ರಿ ಪಕ್ಷದ ಹಿರಿಯ ನಾಯಕರೆಲ್ಲಾ ಸೇರಿ ಚುನಾವಣೆಯ ಸಂಬಂಧ ಹಲವು ಸಭೆ ನಡೆಸಿ ರಣತಂತ್ರ ರೂಪಿಸಿದ್ದೇವೆ. ಅಂತೆಯೇ ಜಂಟಿಯಾಗಿ ಚುನಾವಣೆಗೆ ದುಡಿಯಲಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.