ಸಿಬಿಐ ನಿರ್ದೇಶಕರಾಗಿ ಅಲೋಕ್ ವರ್ಮಾ ಮುಂದುವರೆಯಲಿದ್ದಾರೆ :ಸುಪ್ರೀಂಕೋರ್ಟ್ …

175
firstsuddi

ನವದೆಹಲಿ: ಸಿಬಿಐ ನಿರ್ದೇಶಕರಾಗಿ  ಮುಂದುವರೆಯುವಂತೆ ಅಲೋಕ್ ವರ್ಮಾ ‌ಅವರಿಗೆ ಇಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ್ದ  ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ​ಅಲೋಕ್​ ವರ್ಮಾ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ್ದ  ಕೇಂದ್ರ ಸರ್ಕಾರದ ಆದೇಶ ತಪ್ಪು ಎಂದು ಹೇಳಿದೆ.  ಹಾಗೂ ಅಲೋಕ್​ ವರ್ಮಾ ಅವರು ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.