ಅಂಬರೀಷ್‌ ಅಂತ್ಯ ಕ್ರಿಯೆಗೆ ಸಕಲ ಸಿದ್ಧತೆ…

301
firstsuddi

ಬೆಂಗಳೂರು: ನಟ, ಮಾಜಿ ಸಚಿವ ಅಂಬರೀಷ್‌ ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದು, ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅವರ ಪಾರ್ಥಿವ ಶರೀರದ ದರ್ಶನಕ್ಕೆ ಮಂಡ್ಯದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇಡೀ ರಾತ್ರಿ ಜನ ಸಾಗರ ಹರಿದು ಬಂದು ತಮ್ಮ ಪ್ರೀತಿಯ ನಾಯಕನ ಅಂತಿಮ ದರ್ಶನ ಪಡೆದರು. ಮಂಡ್ಯದಿಂದ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಂಬರೀಶ್ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗಿದ್ದು, ಬಳಿಕ ಕಂಠೀರವ ಕ್ರೀಡಾಂಗಣಕ್ಕೆ ಅದನ್ನು ರವಾನೆ ಮಾಡಲಾಗುವುದು. ಕಂಠೀರವ ಸ್ಟುಡಿಯೋದಲ್ಲಿ  ಅಂಬರೀಷ್ ಅವರ ಅಂತ್ಯಕ್ರಿಯೆ ನಡೆಸಲು ಕುಟುಂಬ ಸದಸ್ಯರು ಹಾಗೂ ರಾಜ್ಯ ಸರ್ಕಾರ ನಿರ್ಧರಿಸಿದ್ದು,ಇಂದು ಮಧ್ಯಾಹ್ನ 2 ಗಂಟೆಗೆ ಅಂತಿಮ ಸಂಸ್ಕಾರ ನಡೆಯಲಿದೆ. ಒಕ್ಕಲಿಗರ ಸಂಪ್ರದಾಯದದಂತೆ ಅಂಬರೀಷ್‌ ಅವರ ಪುತ್ರ ಅಭಿಷೇಕ್ ಅವರು ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಲಿದ್ದಾರೆ. ಅಂಬರೀಷ್ ಅವರ ಅಂತ್ಯಕ್ರಿಯೆ ವೀಕ್ಷಣೆಗೆ ಒಟ್ಟಾರೆ 6000 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಗಣ್ಯರಿಗಾಗಿ ಪ್ರತ್ಯೇಕ ಒಂದು ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.