ಆಂಬುಲೆನ್ಸ್-ಲಾರಿ ಡಿಕ್ಕಿ, ಸ್ಥಳದಲ್ಲೇ ಮೂವರ  ದುರ್ಮರಣ…

248
firstsuddi

ಉಡುಪಿ: ಆಂಬುಲೆನ್ಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೋಟ ಮಣೂರು ಎಂಬಲ್ಲಿ ನಡೆದಿದ್ದು, ಉಲ್ಲಾಸ್  ಎಂಬುವರ ಜೊತೆ ಕುಟುಂಬಸ್ಥರು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕೋಟ ಮಣೂರು ಬಳಿ ಲಾರಿ ಹಾಗೂ ಆಂಬುಲೆನ್ಸ್ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸಾಧನಾ ಉಲ್ಲಾಸ್ ತಳೇಕರ್ ಎಂಬುವರು  ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರೆಲ್ಲರೂ ಉತ್ತರಕನ್ನಡ ಮೂಲದವರು ಎಂದು ಗುರುತಿಸಲಾಗಿದ್ದು, ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.