ಬೆಂಗಳೂರು:ನಿನ್ನೆ ನಿಧನರಾದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಅವರ ಪಾರ್ಥೀವ ಶರೀರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಿಜೆಪಿ ನಾಯಕರು ಹಾಗೂ ಗಣ್ಯರು ಸೇರಿದಂತೆ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು. ನಂತರ ನ್ಯಾಷನಲ್ ಕಾಲೇಜು ಮೈದಾನದಿಂದ

ಅನಂತ್ ಕುಮಾರ್ ಅವರ ಅಂತಿಮ ಯಾತ್ರೆ ಆರಂಭವಾಗಿದ್ದು, ಚಾಮರಾಜಪೇಟೆ ರುದ್ರಭೂಮಿಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿಧಿವಿಧಾನದ ಮೂಲಕ ಅಂತ್ಯಸಂಸ್ಕಾರ ನಡೆಯಲಿದೆ.ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿರುವ ರಾಷ್ಟ್ರೀಯ, ರಾಜ್ಯ ಮಟ್ಟದ ನಾಯಕರಿಗಾಗಿ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ .ಅಮಿತ್ ಷಾ, ಎಲ್.ಕೆ.ಆಡ್ವಾಣಿ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಅವರು ರುದ್ರಭೂಮಿಗೆ ಆಗಮಿಸಿದ್ದಾರೆ.










