ಇಂದು  ಪ್ರಮಾಣ ವಚನ ಸ್ವೀಕರಿಸಿದ ಅನಿತಾ ಕುಮಾರಸ್ವಾಮಿ…

388
firstsuddi

ಬೆಂಗಳೂರು :ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದು,  ರಾಮನಗರ ಉಪ ಚುನಾವಣೆಯಲ್ಲಿ  ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ದಿಸಿ ಜಯಗಳಿಸಿದ ಅನಿತಾ   ಕುಮಾರಸ್ವಾಮಿ ಅವರು ಸ್ಪೀಕರ್ ರಮೇಶ್ ಕುಮಾರ್ ಕಚೇರಿಯಲ್ಲಿ ತಮ್ಮ ಬೆಂಬಲಿಗರ ಜೊತೆಯಲ್ಲಿ ಇಂದು ರಾಮನಗರ ಶಾಸಕಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.ಪ್ರಮಾಣವಚನ ಸ್ವೀಕರಿಸಿದ ಬಳಿಕ‌ ಮಾತನಾಡಿದ ಅನಿತಾ ಕುಮಾರಸ್ವಾಮಿ ಅವರು  ತಮ್ಮನ್ನು ಆಯ್ಕೆ ಮಾಡಿದ ರಾಮನಗರ ಕ್ಷೇತ್ರದ ಜನರಿಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.  ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ.‌ ಒಂದು ವೇಳೆ ಸಚಿವ ಸ್ಥಾನ ಕೊಟ್ಟರೆ ಯಶಸ್ವಿಯಾಗಿ ನಿಭಾಯಿಸುತ್ತೇನೆ ಆದರೆ ನಾನು ಸಚಿವ ಸ್ಥಾನಕ್ಕೆ ಬೇಡಿಕೆ ಇಡುವುದಿಲ್ಲ ಎಂದಿದ್ದಾರೆ.