ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದ.ಕ. ದ್ವಿತೀಯ…

192
firstsuddi

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2018-19ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು ಬೆಳಗ್ಗೆ ಪ್ರಕಟಿಸಿದೆ.ಪದವಿ ಪೂರ್ವ ಶಿಕ್ಷಣ ಇಲಾಖೆ ಉಯ ನಿರ್ದೇಶಕಿ ಸಿ.ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು.ಫಲಿತಾಂಶದಲ್ಲಿ ಉಡುಪಿ ಪ್ರಥಮ, ದ.ಕ. ದ್ವಿತೀಯ, ಕೊಡಗು ತೃತೀಯ ಸ್ಥಾನ ಮತ್ತು ಚಿತ್ರದುರ್ಗ ಕೊನೆಯ ಸ್ಥಾನ ಪಡೆದಿದೆ.

ಶೇ. 92.20 ಅಂಕಗಳನ್ನು ಗಳಿಸಿರುವ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶೇ.90.91 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ. ಕೊಡಗು ಶೇ. 83.31ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಶೇ.51.42 ಫಲಿತಾಂಶ ಪಡೆದಿರುವ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.