ಬೆಂಗಳೂರು- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜಿ ಗ್ರಾಮದ ಮುಂಡಡ್ಕ ನಿವಾಸಿ ಮೋಹನ್ ನಾಯಕ್ ಎಂಬಾತನನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿದ್ದು, ಗೌರಿ ಹತ್ಯೆಗೆ ಆರೋಪಿಗಳಿಗೆ ಗನ್ ಒದಗಿಸಿದ ಹಾಗೂ ಹತ್ಯೆ ವೇಳೆ ಬೈಕ್ ಚಲಾಯಿಸಿದ ಆರೋಪದಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ.