ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದು ಕೋರಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಕೆ…

169
firstsuddi

ಬೆಂಗಳೂರು : ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮೆರೆಯುತ್ತಲೇ ಇದ್ದು, ಹೀಗಾಗಿ ಈಗ ನಿಗಧಿಯಾಗಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಬೆಳಗಾವಿಯ ರಾಜಶ್ರೀ ಎಂಬುವವರು ಸುಪ್ರೀಂ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಈಗಾಗಲೇ ಕೊರೊನಾ ವೈರಸ್ ಪ್ರಕರಣ ಹೆಚ್ಚಿರುವ ರಾಜ್ಯಗಳಾದ ತಮಿಳುನಾಡು, ತೆಲಂಗಾಣ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಮಕ್ಕಳ ಆರೋಗ್ಯದ ದೃಷ್ಠಿಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದ್ದು, ಹೀಗಾಗಿ ನಮ್ಮ ರಾಜ್ಯದಲ್ಲೂ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ಕುರಿತು ಹೈಕೋರ್ಟ್ ಒಪ್ಪಿಗೆ ಸೂಚಿಸದ ಹಿನ್ನೆಲೆ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿದೆ.