ವಿಧಾನಸಭಾ ಚುನಾವಣೆ ಹಿನ್ನೆಲೆ : ಯಾವುದೇ ವ್ಯಕ್ತಿಗಳು ಶಸ್ತ್ರಾಸ್ತ್ರ, ಬಂದೂಕು ಹಿಡಿದು ತಿರುಗಾಡುವುದಕ್ಕೆ ನಿಷೇಧ

484

ಚಿಕ್ಕಮಗಳೂರು : ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯ ವಿವಿಧ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳ ಅಧೀನದಲ್ಲಿರುವ ಸರ್ಕಾರಿ ವಾಹನಗಳನ್ನು ಸುಸ್ಥಿಯಲ್ಲಿಟ್ಟುಕೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ ೧೨ ರಂದು ನಡೆಯಲಿರುವ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಶಾಂತಿಯುತವಾಗಿ ನಡೆಯುವ ಸಲುವಾಗಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರು ಪರವಾನಿಗೆಯೊಂದಿಗೆ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಸಾರ್ವಜನಿಕ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಸಮೀಪದ ಪೊಲೀಸ್ ಠಾಣೆಯಲ್ಲಿ ಅಥವಾ ಆಯುಧಗಳನ್ನು ಠೇವಣಿ ಇಡಲು ಅಧಿಕೃತವಾಗಿ ಪರವಾನಗಿ ಹೊಂದಿರುವ ವಹಿವಾಟುದಾರರಲ್ಲಿ ಠೇವಣಿ ಇಡಬೇಕು.

ಮಾರ್ಚ್ ೨೭ ರಿಂದ ವಿಧಾನ ಸಭಾ ಚುನಾವಣಾ ಪ್ರಕ್ರಿಯೆಗಳು ಮುಕ್ತಾಯಗೊಳ್ಳುವವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿಗಳು ಶಸ್ತ್ರಾಸ್ತ್ರ, ಬಂದೂಕು ಹಿಡಿದುಕೊಂಡು ತಿರುಗಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಆದೇಶಿಸಿದ್ದಾರೆ. ವಿಧಾನಸಭಾ ಚುನಾವಣೆಯನ್ನು ಜಿಲ್ಲೆಯಲ್ಲಿ ಶಾಂತಿ, ಶಿಸ್ತು ಪಾಲನೆಯುತವಾಗಿ ಹಾಗೂ ಮುಕ್ತವಾಗಿ ನಡೆಸುವ ಸಲುವಾಗಿ ಠೇವಣಿ ಇಡಲಾಗುವ ಶಸ್ತ್ರಾಯುಧ ಪರಿಶೀಲನೆ ಹಾಗೂ ಮೇಲುಸ್ತುವಾರಿ ನೋಡಿಕೊಳ್ಳಲು ಅಧ್ಯಕ್ಷರನ್ನಾಗಿ ಜಿಲ್ಲಾಧಿಕಾರಿಗಳನ್ನು, ಉಪಾಧ್ಯಕ್ಷರಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು, ಸದಸ್ಯ ಕಾರ್ಯದರ್ಶಿಯಾಗಿ  ಹೆಚ್ಚುವರಿ ಪೊಲೀಸ್ ಅಧೀಕ್ಷರನ್ನು ಹಾಗೂ ಸದಸ್ಯರನ್ನಾಗಿ ಅಪರ ಜಿಲ್ಲಾಧಿಕಾರಿಗಳನ್ನು ಒಳಗೊಂಡ ಜಿಲ್ಲಾ ಮಟ್ಟದ ಪರಾಮರ್ಶಕ ಸಮಿತಿಯನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.