ವಿಧಾನಸಭೆ ಚುನಾವಣೆ ಹಿನ್ನೆಲೆ : ಮದ್ಯ ಮುಕ್ತ ಚುನಾವಣೆಗೆ ಟೋಲ್ ಫ್ರೀ ಸಂಖ್ಯೆ

407

ಚಿಕ್ಕಮಗಳೂರು : ಮೇ ೧೨ ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಮದ್ಯ ಮುಕ್ತ ಚುನಾವಣೆಯಾಗಿ ನಡೆಸಲು ಮುಂಜಾಗ್ರತೆಯಾಗಿ ಜಿಲ್ಲೆಯಲ್ಲಿ ಟೋಲ್ ಫ್ರೀ ಸಂಖ್ಯೆಯನ್ನು ತೆರೆಯಲಾಗಿದೆ. ಅಕ್ರಮ ಮದ್ಯ ಶೇಖರಣೆ, ಸಾಗಾಣಿಕೆ ಮತ್ತು ಮಾರಾಟದ ಬಗ್ಗೆ ಸಾರ್ವಜನಿಕರಿಂದ ಯಾವುದೇ ದೂರುಗಳಿದ್ದಲ್ಲಿ ಅಬಕಾರಿ ಉಪ ಆಯುಕ್ತರವರ ಕಚೇರಿಯ ಉಚಿತ ದೂರವಾಣಿ ಸಂಖ್ಯೆ ೧೮೦೦-೪೨೫-೮೨೪೨ ಸಂಖ್ಯೆಗೆ ಮಾಹಿತಿ ನೀಡಲು ಅಬಕಾರಿ ಇಲಾಖೆಯ ಉಪ ಆಯುಕ್ತರ ಪ್ರಕಟಣೆಯಲ್ಲಿ ಕೋರಿದೆ.

ಜಿಲ್ಲೆಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯನ್ನು ನಡೆಸಲು ಎಲ್ಲಾ ಸಿದ್ದತೆಗಳನ್ನು ಜಿಲ್ಲಾಡಳಿತ ಕೈಗೊಂಡಿದ್ದು, ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಇರಬಹುದಾದ ಮುಖ್ಯಮಂತ್ರಿ, ಮಂತ್ರಿ ಮಹೋದಯರು ಮತ್ತು ರಾಜಕೀಯ ವ್ಯಕ್ತಿಗಳ ಭಾವಚಿತ್ರವನ್ನು, ಸರ್ಕಾರದ ಸಾಧನೆಗಳನ್ನು ಸಾರುವ ಜಾಹಿರಾತು ಫಲಕ, ಫ್ಲೆಕ್ಸ್ ಮತ್ತು ವೆಬ್‌ಸೈಟ್‌ಗಳನ್ನು ಚುನಾವಣೆ ಘೋಷಣೆಯಾದ ೨೪ ಗಂಟೆಯೊಳಗೆ ತೆರವಿಗೆ ಈಗಾಗಲೇ ಸೂಚಿಸಲಾಗಿದೆ.

ಯಾವುದಾದರು ಇಲಾಖೆಗಳಲ್ಲಿ ಜಾಹಿರಾತು ಫಲಕಗಳ ತೆರವಿಗೆ ಕ್ರಮಕೈಗೊಳ್ಳದಿದ್ದರೆ ಇದನ್ನು ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಎಂದು ಪರಿಗಣಿಸಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.