ಚಿಕ್ಕಮಗಳೂರಲ್ಲಿ ಬಿಜೆಪಿ ಜಿಪಂ ಸದಸ್ಯರು ಪಾದಯಾತ್ರೆ ಮಾಡಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು

791

ಚಿಕ್ಕಮಗಳೂರು : ಸರ್ಕಾರ ಕುಡಿಯೋ ನೀರಿಗೆ ಹಣ ನೀಡಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ, ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯನ್ನ ಬಹಿಷ್ಕರಿಸಿದ ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರು ಪಾದಾಯತ್ರೆ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಚಿಕ್ಕಮಗಳೂರು ಜಿಲ್ಲಾದ್ಯಂತ ಕುಡಿಯೋ ನೀರಿನ ಸಮಸ್ಯೆ ತಲೆದೂರಿದೆ ಒಟ್ಟು 24 ಕೋಟಿಯಷ್ಟು ಹಣ ಬೇಕಾಗಿದೆ. ಕಡೂರು ಹಾಗೂ ತರೀಕೆರೆಯಲ್ಲಿ ಕುಡಿಯೋ ನೀರಿಗಾಗಿ ತೀವ್ರ ಸಂಕಷ್ಟ ಎದುರಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಜನವರಿಯಲ್ಲೇ ಹಣ ಬಿಡುಗಡೆ ಮಾಡ್ತೀವಿ ಎಂದೇಳಿದ್ದ ಸರ್ಕಾರ ಈವರೆಗೂ ಹಣ ನೀಡಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ಪಂಚಾಯತ್ ಸದಸ್ಯರು ಸುಮಾರು ಐದು ಕಿ.ಮೀ.ನಷ್ಟು ಪಾದಯಾತ್ರೆ ಮೂಲಕ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಸರ್ಕಾರ ಕೂಡಲೇ ಹಣ ನೀಡದಿದ್ರೆ, ಪಂಚಾಯತ್ ರಾಜ್ ವ್ಯವಸ್ಥೆಯ ಎಲ್ಲಾ ಜನಪ್ರತಿನಿಧಿಗಳು ತೀವ್ರವಾಗಿ ಹೋರಾಟ ಮಾಡೋದಾಗಿ ಎಚ್ಚರಿಸಿದ್ದಾರೆ.