ದೆಹಲಿ:ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಸಿಜೆಐ ರಂಜನ್ ಗೋಗೊಯ್ ನೇತೃತ್ವದ ಪೀಠ 2019ರ ಜನವರಿಗೆ ವಿಚಾರಣೆ ಮುಂದೂಡಿದ್ದು, ರಾಮಮಂದಿರ ನಿರ್ಮಾಣದ ಜಾಗವನ್ನು ಮೂರು ಭಾಗ ಮಾಡಿ 2010ರಲ್ಲಿ ಅಲಹಬಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ಕುರಿತು ಅರ್ಜಿ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ಮತ್ತು ನ್ಯಾಯಮೂರ್ತಿ ಕೆಎಂ ಜೋಸೆಫ್, ಅವರಿದ್ದ ನ್ಯಾಯಪೀಠ ವಿಚಾರಣೆಯನ್ನು 2019ರ ಜನವರಿಗೆ ಮುಂದೂಡಿದ್ದಾರೆ.










