ನವದೆಹಲಿ: ಅಯೋಧ್ಯೆ ರಾಮ ಮಂದಿರ ವಿವಾದದ ವಿಚಾರಣೆಯನ್ನು ತುರ್ತಾಗಿ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಜನವರಿಗೂ ಮೊದಲೇ ಪ್ರಕರಣದ ವಿಚಾರಣೆ ನಡೆಸುವಂತೆ ಅಖಿಲ ಭಾರತ ಹಿಂದು ಮಹಾಸಭಾ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಹಾಗೂ ನ್ಯಾಯಮೂರ್ತಿ ಎಸ್.ಕೆ. ಕೌಲ್ ಅವರಿದ್ದ ಪೀಠ ತುರ್ತು ಅರ್ಜಿ ಪರಿಶೀಲನೆ ನಡೆಸಲು ತಿರಸ್ಕರಿಸಿದೆ. ಈ ಮೊದಲೇ ಆದೇಶಿಸಿದಂತೆ ಅರ್ಜಿಯ ವಿಚಾರಣೆ ಜನವರಿಯಲ್ಲಿ ನಡೆಸಲಾಗುವುದು ಎಂದು ತಿಳಿಸಿದೆ.










