ಬೆಂಗಳೂರು:ನಗರದ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಅರ್ಧ ದಿನ ದೇವಸ್ಥಾನ, ಅರ್ಧ ದಿನ ಐಷಾರಾಮಿ ಹೋಟೆಲ್ ನಲ್ಲಿ ಕುಳಿತು ವ್ಯವಹಾರ ಮಾಡುತ್ತಾರೆ.ಇದನ್ನೇ ಸಾಧನೆ ಅಂತ ಹೇಳುವುದು ಮುಖ್ಯಮಂತ್ರಿಗೆ ಶೋಭೆ ತರುವುದಿಲ್ಲ. ಸರ್ಕಾರದ ಮೇಲೆ ಮುಖ್ಯಮಂತ್ರಿಗೆ ಹಿಡಿತವೇ ಇಲ್ಲ. ಸಾಂದರ್ಭಿಕ ಶಿಶುವಿಗೆ ಯಾವುದೇ ಗೊತ್ತು ಗುರಿ ಇಲ್ಲ. ರೈತರ ಆತ್ಮಹತ್ಯೆಗೆ ಮುಖ್ಯಮಂತ್ರಿಯೇ ಹೊಣೆ. ರೈತ ಮಹಿಳೆಯ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಮಾತೆತ್ತಿದ್ದರೆ ಕುಮಾರಸ್ವಾಮಿ ರಾಜೀನಾಮೆ ಬಿಸಾಕ್ತೀನಿ ಅಂತಾರೆ ಇದು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.










