ಬಾಳೆಹೊನ್ನೂರು :ಗ್ರಾಮ ಪಂಚಾಯಿತಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ…

676
firstsuddi

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ಮುಂದೆ ಏಕಾಂಗಿ‌ಯಾಗಿ ಪ್ರತಿಭಟನೆ ನಡೆಸುತ್ತಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಬಿ.ಕಣಬೂರು ಗ್ರಾಮ ಪಂಚಾಯಿತಿ ಮುಂದೆ ನಡೆದಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಭ್ರಷ್ಟಾಚಾರ ಆರೋಪ ಮಾಡಿ  ಸಾಮಾಜಿಕ ಹೋರಾಟಗಾರ, ಅಶ್ರಫ್ ಎಂಬುವರು ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹಕ್ಕೆ ಗ್ರಾಮ ಪಂಚಾಯಿತಿ ಮುಂದೆ ಕುಳಿತಿದ್ದು, ಈ ಹಿಂದೆಯೂ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದರು ಎನ್ನಲಾಗಿದೆ.