ಚಿಕ್ಕಮಗಳೂರು: ನಾಯಿ ತಪ್ಪಿಸಲು ಹೋಗಿ ಆಟೋ ಪಲ್ಟಿಯಾಗಿದ್ದು, ಸ್ಥಳದಲ್ಲೇ ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಅಕ್ಷಯ ನಗರದಲ್ಲಿ ನಡೆದಿದೆ. ಮಹಮ್ಮದ್ ಅಬೂಬಕರ್ ಮೃತ ಮಗು. ಆಟೋದಲ್ಲಿದ್ದ ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.