ಬೆಂಗಳೂರು: ನಡೆದಾಡುವ ದೇವರು, ಶತಾಯುಷಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿ ರವಿ ಚನ್ನಣ್ಣನವರ್ ಅವರು ಸಂತಾಪ ಸೂಚಿಸಿದ್ದು, ಲಿಂಗೈಕರಾದ ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ದು:ಖದಲ್ಲಿರುವ ಸಮಸ್ತ ಭಕ್ತಾಭಿಮಾನಿಗಳ ಶೋಕದಲ್ಲಿ ನಾವು ಸಹ ಭಾಗಿ. ಜಾತಿ, ಮತ, ಧರ್ಮಗಳ ಭೇದವಿಲ್ಲದೆ ಎಲ್ಲರ ಹಿತಕ್ಕಾಗಿ ದುಡಿದ ಮಹಾನ್ ಚೇತನ ನಡೆದಾಡುವ ದೇವರು ಎಂದು ಟ್ವೀಟ್ ಮೂಲಕ ರವಿ ಚನ್ನಣ್ಣನವರ್ ಅವರು ಸಂತಾಪ ಸೂಚಿಸಿದ್ದಾರೆ.











