ಬೆಂಗಳೂರು : ಖಾಸಗಿ ಹೋಟೆಲ್ ಮೇಲೆ ಐಟಿ ಅಧಿಕಾರಿಗಳು ದಾಳಿ…

135
firstsuddi

ಬೆಂಗಳೂರು : ಆನಂದ್ ರಾವ್ ವೃತ್ತದ ಬಳಿ ಇರುವ ರಾಜಮಹಲ್ ಹೋಟೆಲ್ ಮೇಲೆ ಐಟಿ ದಾಳಿ ನಡೆಸಿದ್ದು, ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯನಿರ್ವಹಾಹಕ ಇಂಜಿನಿಯರ್ ನಾರಾಯಣಗೌಡ ಬಿ.ಪಾಟೀಲ್ ಅವರು ಹೋಟೆಲ್‍ನ ಕೊಠಡಿ ಸಂಖ್ಯೆ 104,105 ಮತ್ತು 115ರಲ್ಲಿ 500 ರೂ. ಮತ್ತು 2 ಸಾವಿರ ರೂ. ನೋಟುಗಳ 2 ಕೋಟಿ ಹಣವನ್ನು ಸಂಗ್ರಹ ಮಾಡಿದ್ದು, ಖಚಿತ ಮಾಹಿತಿ ಅನ್ವಯ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯ ವೇಳೆ 500 ರೂ. ಮತ್ತು 2 ಸಾವಿರ ರೂ. ನೋಟುಗಳ 2 ಕೋಟಿ ಹಣವನ್ನು ಸಂಗ್ರಹ ಮಾಡಿರುವುದು ಬೆಳಕಿಗೆ ಬಂದಿದ್ದು, ಹಣವನ್ನು ಐಟಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಈ ಹಣವನ್ನು ಸಂಗ್ರಹ ಮಾಡಿರಬಹುದು ಎಂದು ಊಹಿಸಲಾಗಿದ್ದು, ಐಟಿ ಅಧಿಕಾರಿಗಳಿಗೆ ಈ ಮಾಹಿತಿ ತಿಳಿಯುತ್ತಿದ್ದಂತೆ ಇಂಜಿನಿಯರ್ ನಾರಾಯಣಗೌಡ ಬಿ.ಪಾಟೀಲ್ ಅವರು ಅಲ್ಲಿಂದ ಪರಾರಿಯಾಗಿದ್ದು, ಅವರು ಕಳೆದ ನಾಲ್ಕು ವರ್ಷದಿಂದ ಹಾವೇರಿಯ ಗ್ರಾಮೀಣಾಭಿವೃದ್ಧಿ ಇಲಾಖೆಯ ಎಕ್ಸಿಕ್ಯುಟೀವ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಹಾವೇರಿಯಲ್ಲಿ ಅವರು ಮೂರು ಮನೆ ಕಟ್ಟಿಸಿದ್ದು, ಬೆಂಗಳೂರಿಗೆ ಆಗಾಗ ಹಣವನ್ನು ಕಳುಹಿಸುತ್ತಾರೆ ಎಂಬ ಮಾಹಿತಿ ಐಟಿ ಅಧಿಕಾರಿಗಳಿಗೆ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ  ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.