ಬೆಂಗಳೂರು:ಎರಡನೇ ಹಂತದ ಮೆಟ್ರೋ ರೈಲಿಗೆ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಚಾಲನೆ…

632
firstsuddi

ಬೆಂಗಳೂರು: ಆರು ಬೋಗಿಗಳ ಮತ್ತೊಂದು ಮೆಟ್ರೋ ರೈಲು ಸಂಚಾರಕ್ಕೆ ಸಿದ್ಧಗೊಂಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಇಂದು ಚಾಲನೆ ನೀಡಿದರು. ಕುಮಾರಸ್ವಾಮಿಯವರೊಂದಿಗೆ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಹಾಗೂ ಸಚಿವ ಡಿ.ಸಿ.ತಮ್ಮಣ್ಣ, ಮೇಯರ್ ಗಂಗಾಂಬಿಕೆ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು. ಮುಖ್ಯಮಂತ್ರಿಗಳು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ನಾಗಸಂದ್ರ ಮೆಟ್ರೋ ನಿಲ್ದಾಣದವರೆಗೆ ಪ್ರಯಾಣ ಮಾಡಿದರು.