ಬೆಂಗಳೂರು: ಬಿಬಿಎಂಪಿ ಕಾರ್ಪೊರೇಟರ್ ಏಳುಮಲೈ(40) ಅವರು ತಡರಾತ್ರಿ 1.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸಗಾಯಪುರಂ ವಾರ್ಡ್ 60ರ ಪಕ್ಷೇತರ ಕಾರ್ಪೋರೇಟರ್ ಆಗಿದ್ದ ಏಳುಮಲೈ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಏಳುಮಲೈ ಅವರು ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಕೋಮಾ ಸ್ಥಿತಿ ತಲುಪಿದ್ದು, ಅವರು ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ.










