ಬಿಬಿಎಂಪಿಯ ಉಪಮೇಯರ್ ರಮೀಳಾ ಉಮಾಶಂಕರ್ ನಿಧನ…

575
firstsuddi

ಬೆಂಗಳೂರು: ಕಳೆದ ವಾರವಷ್ಟೇ ಬಿಬಿಎಂಪಿಯ ಉಪಮೇಯರ್ ಆಗಿ ಆಯ್ಕೆಯಾಗಿದ್ದ ರಮೀಳಾ ಉಮಾಶಂಕರ್ (44) ಅವರು ತೀವ್ರ ಹೃದಯಾಘಾತದಿಂದ ಗುರುವಾರ ತಡರಾತ್ರಿ ನಿಧನರಾಗಿದ್ದು, ತಡರಾತ್ರಿ 12 ಗಂಟೆಯ ಸುಮಾರಿಗೆ ರಮೀಳಾ ಅವರಿಗೆ ತೀವ್ರ ಎದೆನೋವು ಕಾಣಸಿಕೊಂಡಿತ್ತು. ಕೂಡಲೇ ರಮೀಳಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ  ಕೊನೆಯುಸಿರೆಳೆದಿದ್ದಾರೆ.