ಬೆಳಗಾವಿ : ಜಿಲ್ಲಾಧಿಕಾರಿಗಳ ನಿವಾಸದಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆ ಆತ್ಮಹತ್ಯೆ…

153
firstsuddi

ಬೆಳಗಾವಿ : ಜಿಲ್ಲಾಧಿಕಾರಿಗಳ ಮನೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವಿಶ್ವೇಶ್ವರಯ್ಯ ನಗರದಲ್ಲಿ ನಡೆದಿದೆ. ಪ್ರಕಾಶ್(30) ಆತ್ಮಹತ್ಯೆ ಮಾಡಿಕೊಂಡ ಪೇದೆ ಎಂದು ಗುರುತಿಸಲಾಗಿದ್ದು, ಪ್ರಕಾಶ್ ಅವರು ಬೆಳಗಾವಿ ಜಿಲ್ಲಾಧಿಕಾರಿ ಎಸ್‍ಬಿ ಬೊಮ್ಮನಹಳ್ಳಿ ಅವರ ನಿವಾಸದಲ್ಲಿ ಕಾರ್ಯ ನಿರ್ವಸುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಸೆಕ್ಯೂರಿಟಿ ರೂಮ್‍ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲಸದ ಒತ್ತಡವೇ ಪ್ರಕಾಶ್ ಅವರ ಆತ್ಮಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಹಾಗೂ ಜಿಲ್ಲಾಧಿಕಾರಿ ಎಸ್‍ಬಿ ಬೊಮ್ಮಹಳ್ಳಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.