ಬೆಳಗಾವಿ : ದಿವಂಗತ ಸುರೇಶ್ ಅಂಗಡಿ  ಕುಟುಂಬಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಾಂತ್ವನ…

140
ಬೆಳಗಾವಿ: ಇತ್ತೀಚೆಗೆ ನಿಧನರಾದ ರೈಲ್ವೆ ಸಚಿವ ಸುರೇಶ್ ಅಂಗಡಿ ಅವರ ಬೆಳಗಾವಿಯ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ, ದಿವಂಗತ ಸುರೇಶ್ ಅಂಗಡಿ ಅವರ ತಾಯಿ, ಪತ್ನಿ, ಮಕ್ಕಳಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಮೇಶ್ ಜಾರಕಿಹೊಳಿ, ಜಗದೀಶ್ ಶೆಟ್ಟರ್ ಮತ್ತಿತರರು ಉಪಸ್ಥಿತರಿದ್ದರು.