ನವದೆಹಲಿ :ಮಲಯಾಳಂನ ಕಣ್ ಸನ್ನೆ ಚೆಲುವೆ ಪ್ರಿಯಾ ವಾರಿಯರ್ ವಿರುದ್ಧ ಇದ್ದ ಪ್ರಕರಣವನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್,ಕೇಸು ದಾಖಲಿಸಿದ್ದ ತೆಲಂಗಾಣ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇದರಿಂದ ಪ್ರಿಯಾ ವಾರಿಯರ್ ನಿರಾಳವಾಗಿದ್ದಾರೆ. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ಮತ್ತು ಡಿ ವೈ ಚಂದ್ರಚೂಡ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸಿ ಯಾರೋ ಚಲನಚಿತ್ರಗಳಲ್ಲಿ ಹಾಡು ಹಾಡಿಕೊಂಡರೆ, ನಿಮಗೆ ದೂರು ದಾಖಲಿಸುವುದನ್ನು ಬಿಟ್ಟರೆ ಬೇರೆ ಕೆಲಸ ಇಲ್ಲವಾ? ಎಂದು ತೆಲಂಗಾಣ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.