ಚಿಕ್ಕಮಗಳೂರು : ನಗರದ ಬಸ್ ನಿಲ್ದಾಣದ ಬಳಿಯ ಇಂದಿರಾ ಕ್ಯಾಂಟೀನ್ ಉದ್ಘಾಟನೆ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಸಚಿವ ಜಾರ್ಜ್ ಅವರು ಇಂದಿರಾ ಕ್ಯಾಂಟೀನ್ ಉದ್ಘಾಟನೆ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಅಧ್ಯಕ್ಷರಿಗೆ ಆಮಂತ್ರಣ ನೀಡದ ಹಿನ್ನೆಲೆ ಹಾಗೂ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಜಿಲ್ಲಾಡಳಿತದ ವಿರುದ್ಧ ಜಿಪಂ ಅಧ್ಯಕ್ಷೆ ಸುಜಾತ, ತಾ ಪಂ ಅಧ್ಯಕ್ಷ ಜಯಣ್ಣ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಸಿ.ಟಿ.ರವಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡುವಂತಹ ಸ್ಥಿತಿ ನಿರ್ಮಣವಾಗಿತ್ತು.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು:ಸಚಿವ ಜಾರ್ಜ್ ಇಂದಿರಾ ಕ್ಯಾಂಟೀನ್ ಉದ್ಘಾಟನೆ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ…









