ಜನಾರ್ದನ ರೆಡ್ಡಿ ಅವರನ್ನು ಬಿಜೆಪಿ ಸಮರ್ಥಿಸಿಕೊಂಡಿಲ್ಲ: ಶೋಭಾ ಕರಂದ್ಲಾಜೆ…

241
firstsuddi

ಉಡುಪಿ: ಸುದ್ದಿಗಾರರೊಂದಿಗೆ ಮಾತನಾಡಿದ  ಸಂಸದೆ ಶೋಭಾ ಕರಂದ್ಲಾಜೆ ಅವರು ಬಿಜೆಪಿ  ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಯಾವುದೇ ಚರ್ಚೆಗಳು ಆಗಲ್ಲ. ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಜನಾರ್ದನ ರೆಡ್ಡಿ ಅವರನ್ನು ಬಿಜೆಪಿ ಸಮರ್ಥಿಸಿಕೊಂಡಿಲ್ಲ ಮತ್ತು ಸಮರ್ಥಿಸಿಕೊಳ್ಳಬೇಕಾದ ಅಗತ್ಯವೂ ಇಲ್ಲ.ಅವರು ಕೇಸ್‌ ವಿರುದ್ಧ ಕೋರ್ಟ್‌ ನಲ್ಲಿ ಹೋರಾಟ ಮಾಡುತ್ತಿದ್ದಾರೆ.ಆದರೆ ಅವರನ್ನು  ತರಾತುರಿಯಲ್ಲಿ ಯಾಕೆ ಬಂಧಿಸಿದರು ಎಂದು ಪ್ರಶ್ನಿಸಿದ್ದಾರೆ. ರೈತರ ಆತ್ಮಹತ್ಯೆ ನಿರಂತರ ನಡೆಯುತ್ತಿದೆ. ಸಾಲಮನ್ನಾ ಘೋಷಣೆಯಾಗಿದ್ದು, ಕಾರ್ಯರೂಪಕ್ಕೆ ಬಂದಿಲ್ಲ.ಕರ್ನಾಟಕ ಸರ್ಕಾರ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ವಿರೋಧ ಪಕ್ಷದ ನಾಯಕರನ್ನು ಗುರಿ ಮಾಡುತ್ತಿದೆ. ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.