ಮೈಸೂರು : ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಅವರಿಗೆ ಇಂದು ಮುಂಜಾನೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಶಾಸಕ ಎಸ್.ಎ ರಾಮದಾಸ್ ಅವರಿಗೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು ಲಘು ಹೃದಯಾಘಾತವಾಗಿರುವುದಾಗಿ ತಿಳಿಸಿದ್ದು, ಪರಿಣಾಮ ಶಾಸಕರಿಗೆ ಸ್ಟಂಟ್ ಅಳವಡಿಕೆ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.