ಮಂಗಳೂರು: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರು ನಮಗೆ ಯಾವುದೇ ಆಪರೇಷನ್ ಭೀತಿ ಇಲ್ಲ . ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ. ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಆದರೆ ಕಾಂಗ್ರೆಸ್ ಶಾಸಕರು ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ. ಮೈತ್ರಿ ಸರ್ಕಾರ ಐದು ವರ್ಷ ಪೂರ್ತಿ ಅಧಿಕಾರದಲ್ಲಿರುತ್ತದೆ. ಬಿಜೆಪಿಯ ಶಾಸಕರು ಕಾಂಗ್ರೆಸ್ ನ ಹಿರಿಯ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.










