ಜಮ್ಮು ಮತ್ತು ಕಾಶ್ಮೀರದಲ್ಲಿ ಪಿ.ಡಿ.ಪಿ-ಬಿ.ಜೆ.ಪಿಯ ಮೈತ್ರಿ ಸರ್ಕಾರ ಕಡಿತಗೊಳ್ಳಲು ನಿರ್ಧರಿಸಿದ್ದು, ಬಿಜೆಪಿ ರಾಜ್ಯಪಾಲರಿಗೆ ಈ ಬಗ್ಗೆ ಪತ್ರ ಬರೆದಿದ್ದು, ಇದರೊಂದಿಗೆ ಮೂರು ವರ್ಷಗಳ ಹಿಂದೆ ರಚನೆಯಾಗಿದ್ದ ಸರ್ಕಾರ ಮುರಿದು ಬಿದ್ದಿದೆ. ಪಿಡಿಪಿ ಮುಖ್ಯಮಂತ್ರಿ ಸ್ಥಾನ ಹಾಗೂ ಬಿಜೆಪಿ ಉಪ ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಂಡಿದ್ದವು ಆದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರಿಂದ ಹಿಂಸಾಚಾರ ನಡೆಯುತ್ತಿದ್ದು ಈ ಬಗ್ಗೆ ಬಿ.ಜೆ.ಪಿ ರಾಪ್ಟೀಯ ಅಧ್ಯಕ್ಷ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಲಹೆ ಮೇರೆಗೆ ಪಿ.ಡಿ.ಪಿ ಜೊತೆಗಿನ ಮೈತ್ರಿಯನ್ನು ಕಡಿದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.