ಚಿಕ್ಕಮಗಳೂರು : ಬಿಜೆಪಿ ಶಾಸಕ ಪ್ರೀತಮ್ ಗೌಡ ಅವರ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಖಂಡಿಸಿ ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ರೇವಣ್ಣ ಅವರ ವಿರುದ್ಧ ಘೋಷಣೆ ಕೂಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.









