ಕಬ್ಬು ಬೆಳೆಗಾರರಿಗೆ ಬೆಂಬಲ ನೀಡಿ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ…

185
firstsuddi

ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲು ಮುಂದಾಗಿದ್ದು, ರಾಜ್ಯಾದ್ಯಂತ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಆರ್.ಅಶೋಕ್ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಪ್ರಮುಖ ನಾಯಕರು ಭಾಗಿಯಾಗಿದ್ದಾರೆ.