ಬೆಂಗಳೂರು: ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಟಿಪ್ಪು ಜಯಂತಿ ಕೈಬಿಡಬೇಕೆಂದು ಆಗ್ರಹಿಸಿರುವ ಪ್ರತಿಭಟನಾಕಾರರು, ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ .ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿರುತ್ತಿರುವ ಬಿಜೆಪಿ ನಾಳೆ ಟಿಪ್ಪು ಜಯಂತಿ ಆಚರಿಸಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕೊಡಗು,ಮೈಸೂರು, ಉತ್ತರ ಕನ್ನಡ,ಚಿತ್ರದುರ್ಗ,ಮಂಗಳೂರು ,ಕೋಲಾರ, ಸೇರಿದಂತೆ ಹಲವೆಡೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.