ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಗೆ ಬಿಜೆಪಿ ಬೆಂಬಲ…

178
firstsuddi

ನವದೆಹಲಿ : ಲೋಕಸಭೆ ಚುನಾವಣೆಗೆ ಬಿಜೆಪಿಯು ಮತ್ತೊಂದು ಪಟ್ಟಿ ಬಿಡುಗಡೆ ಆಗಿದ್ದು, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬೆಂಬಲ ನೀಡಲು ನಿರ್ಧರಿಸಿದೆ. ಡಾ. ಸಿದ್ದರಾಮಯ್ಯ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ತೀರ್ಮಾನಿಸಿದ್ದ ಬಿಜೆಪಿ ತನ್ನ ನಿರ್ಧಾರ ಬದಲಿಸಿಕೊಂಡು ಸುಮಲತಾ ಅಂಬರೀಶ್ ಅವರಿಗೆ ಅಧಿಕೃತವಾಗಿ ಬೆಂಬಲ ಘೋಷಿಸಿದೆ.