ಈ ಹಿಂದೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರೇ ಬಿಜೆಪಿ ವಿರುದ್ಧ ದಂಗೆ ಏಳಿಸುವ ಮಾತಾಡಿದ್ದರು :ಬಿಜೆಪಿ ಟ್ವಿಟ್…

219
firstsuddi

ಬೆಂಗಳೂರು : ಹಾಸನದ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಕಲ್ಲು ತೂರಾಟ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಟ್ವಿಟ್ ಮಾಡಿದ್ದು, ಈ ಹಿಂದೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರೇ ಬಿಜೆಪಿ ವಿರುದ್ಧ ದಂಗೆ ಏಳಿಸುವ ಮಾತಾಡಿದ್ದರು. ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರು ಅದರಿಂದ ಪ್ರಚೋದನೆಗೊಂಡು ಜನಪ್ರತಿನಿಧಿ ಪ್ರೀತಂ ಗೌಡ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ದೇವೇಗೌಡರ ಕುಟುಂಬದ ದೌರ್ಜನ್ಯಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಅಗತ್ಯವಿಲ್ಲ ಎಂದು ಬಿಜೆಪಿ ಟ್ವಿಟ್ ಮಾಡಿದೆ.