ಬೆಂಗಳೂರು :ಸುದ್ಧಿಗಾರರೊಂದಿಗೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು ರಾಜ್ಯದಲ್ಲಿ ಇನ್ನೆರಡು ತಿಂಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಸರ್ಕಾರ ರಚನೆ ಮಾಡುವುದು ಗುರಿಯೋ, ಅಥವಾ ಕನಸೋ, ಅದೇನೇ ಇರಲಿ ಒಟ್ಟಿನಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದು ಖಚಿತ. ಕೆಲ ದಿನಗಳ ಹಿಂದೆ ಆಪರೇಶನ್ ಕಮಲ ನಡೆಯುತ್ತಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ ನಾವು ಯಾವುದೇ ಆಪರೇಷನ್ ಮಾಡಿಲ್ಲ. ಲೋಕಸಭಾ ಚುನಾವಣೆ ವೇಳಗೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಆರ್ ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.










